ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿಯವರು ಇತ್ತೀಚೆಗೆ ಮಂಡಿಸಿದ ಬಜೆಟ್ ನಲ್ಲಿ ರಾಮನಗರ ಜಿಲ್ಲೆಯ ರಾಮದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಘೋಷಣೆಯನ್ನು ಮಾಡಿದ್ದರಲ್ಲದೆ ಹಣವನ್ನು ಸಹ ಮೀಸಲಾಗಿಟ್ಟಿದ್ದರು.
ಇದೀಗ ಉದ್ದೇಶಿತ ರಾಮಮಂದಿರ ನಿರ್ಮಾಣಕ್ಕೆ ಸ್ವಪಕ್ಷೀಯ ಶಾಸಕರಿಂದಲೇ ಆಕ್ಷೇಪ ವ್ಯಕ್ತವಾಗಿದೆ. ವಿಧಾನ ಪರಿಷತ್ ನಲ್ಲಿ ಮಾತನಾಡಿರುವ ಬಿಜೆಪಿ ಸದಸ್ಯ ಆಯನೂರು ಮಂಜುನಾಥ್, ನೇರವಾಗಿ ರಾಮಮಂದಿರ ನಿರ್ಮಾಣ ಮಾಡುವುದು ಸರ್ಕಾರದ ಕೆಲಸವಲ್ಲ ಎಂದು ಹೇಳಿದ್ದಾರೆ.
ಚುನಾಯಿತ ಸರ್ಕಾರಗಳು ಜನರ ಕಲ್ಯಾಣ ಕಾರ್ಯವನ್ನು ಕೈಗೊಳ್ಳಬೇಕೆ ಹೊರತು ದೇವಾಲಯ ನಿರ್ಮಿಸುವ ಕೆಲಸಕ್ಕೆ ಮುಂದಾಗಬಾರದು. ರಾಮಮಂದಿರವನ್ನು ಸಾರ್ವಜನಿಕರು ನಿರ್ಮಾಣ ಮಾಡಿಕೊಳ್ಳಲಿ ಎಂದು ಅವರು ತಿಳಿಸಿದ್ದಾರೆ.