ರಾಮನಗರ: ಅಪರಿಚಿತ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಪರಿಚಿತನ ಕತ್ತು ಕೊಯ್ದು ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಲಾಗಿದೆ.
ರಾಮನಗರ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಬೆಳ್ಳಿಪುರ ಕ್ರಾಸ್ ಬಳಿ ಘಟನೆ ನಡೆದಿದೆ. ಸ್ಥಳಕ್ಕೆ ಹಾರೋಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತನ ಗುರುತು ಪತ್ತೆ, ಕೊಲೆ ಆರೋಪಿಗಳ ಬಂಧನಕ್ಕೆ ಪೊಲೀಸರು ಕ್ರಮಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.