ಬೆಂಗಳೂರು: ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ವಿಪಕ್ಷ ಕಾಂಗ್ರೆಸ್, ಮೂರನೇ ಮಹತ್ವದ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆ. ಈ ಬಾರಿ ಚುನಾವಣೆಯಲ್ಲಿ ಗೆಲ್ಲಲೇಬೇಕೆಂದು ಶಪತ ಮಾಡಿರುವ ಕಾಂಗ್ರೆಸ್ ಮತದಾರರ ಓಲೈಕೆಗಾಗಿ ಇನ್ನಿಲ್ಲದ ಕಸರತ್ತು ನಡೆಸಿದೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡ ಜನರ ಪ್ರತಿ ಮನೆಗೂ 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಿಸಿದರು.
ಈಗಾಗಲೇ ಕಾಂಗ್ರೆಸ್ ಎರಡು ಗ್ಯಾರಂಟಿ ಯೋಜನೆ ಘೋಷಿಸಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ 200 ಯುನಿಟ್ ಉಚಿತ ವಿದ್ಯುತ್ ಹಾಗೂ ಮಹಿಳೆಯರಿಗೆ ಪ್ರತಿ ತಿಂಗಳು 2000 ರೂಪಾಯಿ ಸಹಾಯಧನ ನೀಡುವುದಾಗಿ ತಿಳಿಸಿದೆ. ಇದೀಗ ಪ್ರಣಾಳಿಕೆಯ ಮುಂದುವರಿದ ಭಾಗವಾಗಿ ಮೂರನೇ ಗ್ಯಾರಂಟಿ ಯೋಜನೆ ಬಿಪಿಎಲ್ ಕಾರ್ಡ್ ದಾರರ ಪ್ರತಿ ಕುಟುಂಬಕ್ಕೆ 10 ಕೆಜಿ ಉಚಿತ ಅಕ್ಕಿ ನೀಡುವುದಾಗಿ ಘೋಷಿಸಿದೆ.