HomeKarnatakaBIG NEWS: ಬಿಜೆಪಿ ಮೈಮರೆತರೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ; ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ

BIG NEWS: ಬಿಜೆಪಿ ಮೈಮರೆತರೆ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ; ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ

ಮೈಸೂರು: ಬಿಜೆಪಿ ಕಾರ್ಯಕರ್ತರು ಮೈಮರೆತರೆ ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಬರುತ್ತೆ ಎಂದು ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ ನೀಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಬಿಜೆಪಿ ಕಾರ್ಯಕರ್ತರು ಜಾಗೃತರಾಗಿ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಬಿಜೆಪಿ ಕಾರ್ಯಕರ್ತರು ಎಚ್ಚರ ತಪ್ಪಿದರೆ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬರುತ್ತೆ ಎಂದು ಹೇಳಿದ್ದಾರೆ.

ಅಂದು ಸಿಎಂ ಆಗಿದ್ದ ಸಿದ್ದರಾಮಯ್ಯ ಪಿಎಫ್ ಐ ಹಾಗೂ ಕೆ ಎಫ್ ಡಿಯ 175 ಸದಸ್ಯರ ಮೇಲಿದ್ದ ಕೇಸ್ ವಾಪಸ್ ಪಡೆದಿದ್ದರು ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ನೇತೃತ್ವದ ತಾಲಿಬಾನ್ ಸರ್ಕಾರ ಎಂಬ ಪ್ರತಾಪ್ ಸಿಂಹ್ ಹೇಳಿಕೆ ರಾಜ್ಯಕಿಯದಲ್ಲಿ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular