HomeKarnatakaBIG NEWS: 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ; ನಾನು ನಿವೃತ್ತಿಯಾಗುವ ಪ್ರಶ್ನೆಯೇ ಇಲ್ಲ...

BIG NEWS: 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ; ನಾನು ನಿವೃತ್ತಿಯಾಗುವ ಪ್ರಶ್ನೆಯೇ ಇಲ್ಲ ಎಂದ ಯಡಿಯೂರಪ್ಪ

ಬೆಂಗಳೂರು: ರಾಜ್ಯಾದ್ಯಂತ ಪ್ರವಾಸ ಕೈಗೊಂಡು ಬಿಜೆಪಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸೌಧದ ಬಳಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಹಾಗೂ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ರಾಜ್ಯದ ಉದ್ದಗಲಕ್ಕೂ ಓಡಾಡಿ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುತ್ತೇವೆ ಎಂದರು.

140ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಪಕ್ಷದ ಹಿರಿಯರ ಸಹಕಾರದಿಂದ ಗುರಿ ತಲುಪುವ ವಿಶ್ವಾಸವಿದೆ. ನಾನು ಚುನಾವಣೆಗೆ ಸ್ಪರ್ಧಿಸಲ್ಲ ಎಂದಿದ್ದೇನೆ. ಆದರೆ ನಿವೃತ್ತಿಯಾಗುವ ಪ್ರಶ್ನೆಯೇ ಇಲ್ಲ. ಕೊನೆಯುಸಿರಿರುವವರೆಗೂ ಪಕ್ಷಕ್ಕಾಗಿ ದುಡಿಯುತ್ತೇನೆ ಎಂದು ಹೇಳಿದರು.
,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular