HomeKarnatakaBIG NEWS: ಸುಳ್ಳು ಹೇಳಿದ್ದು ಅವರು, ನಾನಲ್ಲ; ಸಿದ್ದರಾಮಯ್ಯಗೆ ಕಟುಸತ್ಯ ಎದುರಿಸುವ ಕಾಲ ಬಂದಿದೆ; ಟಾಂಗ್...

BIG NEWS: ಸುಳ್ಳು ಹೇಳಿದ್ದು ಅವರು, ನಾನಲ್ಲ; ಸಿದ್ದರಾಮಯ್ಯಗೆ ಕಟುಸತ್ಯ ಎದುರಿಸುವ ಕಾಲ ಬಂದಿದೆ; ಟಾಂಗ್ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸುಳ್ಳು ಹೇಳಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸುಳ್ಳು ಹೇಳಿದ್ದು ಅವರು, ನಾನಲ್ಲ ಎಂದು ತಿರುಗೇಟು ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅರ್ಕಾವತಿ ಬಡಾವಣೆ ರೀಡೂ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಕಟುಸತ್ಯ ಎದುರಿಸುವ ಕಾಲ ಬಂದಿದೆ. ಅರ್ಕಾವತಿ ರೀಡೂ ಬಗ್ಗೆ ಬೊಮ್ಮಾಯಿ ಹೇಳ್ತಿರೋದಲ್ಲ, ನ್ಯಾ.ಕೆಂಪಣ್ಣ ಅವರೇ ಈ ಬಗ್ಗೆ ಹೇಳಿದ್ದಾರೆ ಎಂದರು.

ಸುಳ್ಳು ಹೇಳುತ್ತಿರುವುದು ನಾನಲ್ಲ, ಸಿದ್ದರಾಮಯ್ಯನವರು. ನ್ಯಾ. ಕೆಂಪಣ್ಣ ಅವರ ಆದೇಶದಲ್ಲಿ ಸ್ಪಷ್ಟವಾಗಿದೆ. ಅದನ್ನು ನಾನು ಹೇಳಿದ್ದೇನೆ. ಆದೇಶದಲ್ಲಿ ಏನು ಬಂತು ಅದು ಮುಖ್ಯ ಅಲ್ವಾ? ಈ ಬಗ್ಗೆ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ತೀವಿ ಎಂದು ವಾಗ್ದಾಳಿ ನಡೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular