HomeIndiaಪಾಕ್ ಕ್ರಿಕೆಟ್ ತಂಡವನ್ನು ಬೆಂಬಲಿಸಿದವನಿಂದ ಬಹಿರಂಗ ಕ್ಷಮೆಯಾಚನೆ

ಪಾಕ್ ಕ್ರಿಕೆಟ್ ತಂಡವನ್ನು ಬೆಂಬಲಿಸಿದವನಿಂದ ಬಹಿರಂಗ ಕ್ಷಮೆಯಾಚನೆ

ಇತ್ತೀಚೆಗೆ ನಡೆದ ಪಾಕಿಸ್ತಾನ ಮತ್ತು ನ್ಯೂಜಿಲ್ಯಾಂಡ್ ನಡುವಿನ ಕ್ರಿಕೆಟ್ ಪಂದ್ಯದ ವೇಳೆ ತಾನು ಪಾಕ್ ತಂಡವನ್ನು ಬೆಂಬಲಿಸುವುದಾಗಿ ಹೇಳಿದ್ದ ಗೋವಾದ ವ್ಯಕ್ತಿಯೊಬ್ಬ ಇದೀಗ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾನೆ.

ಈ ವ್ಯಕ್ತಿ ಗೋವಾದ ಕಲಂಗುಟ್ ಬೀಚಿನಲ್ಲಿ ಅಂಗಡಿಯೊಂದನ್ನು ಹೊಂದಿದ್ದು, ಅಲ್ಲಿಗೆ ಭೇಟಿ ನೀಡಿದ್ದ ವ್ಲಾಗರ್ ಒಬ್ಬರು ನೀವು ಯಾವ ತಂಡವನ್ನು ಬೆಂಬಲಿಸುತ್ತೀರಿ ಎಂದು ಪ್ರಶ್ನಿಸಿದ್ದರು. ಅದಕ್ಕೆ ನಾನು ಪಾಕಿಸ್ತಾನ ತಂಡವನ್ನು ಬೆಂಬಲಿಸುತ್ತೇನೆ ಎಂದು ಈತ ಹೇಳಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಕೆರಳಿದ್ದ ಹಲವರು, ಆ ವ್ಯಕ್ತಿಯ ಅಂಗಡಿಗೆ ತೆರಳಿ ಕ್ಷಮೆ ಕೇಳಲು ಪಟ್ಟು ಹಿಡಿದಿದ್ದರು. ಇದಕ್ಕೆ ಮಣಿದ ಆ ವ್ಯಕ್ತಿ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಲ್ಲದೇ ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular