HomeKarnatakaBIG NEWS: JDS ಸಭೆ ದಿಢೀರ್ ರದ್ದು; ಮತ್ತೆ ಹಾಸನ ಕಾರ್ಯಕರ್ತರ ಸಭೆ ಕರೆಯಲ್ಲ ಎಂದ...

BIG NEWS: JDS ಸಭೆ ದಿಢೀರ್ ರದ್ದು; ಮತ್ತೆ ಹಾಸನ ಕಾರ್ಯಕರ್ತರ ಸಭೆ ಕರೆಯಲ್ಲ ಎಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಹಾಸನ ಜೆಡಿಎಸ್ ಟಿಕೆಟ್ ಗೊಂದಲ ವಿಚಾರವಾಗಿ ಇಂದು ಸಂಜೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಜೆಡಿಎಸ್ ಕಾರ್ಯಕರ್ತರ ಸಭೆ ದಿಢೀರ್ ರದ್ದಾಗಿದೆ.

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಸಂಜೆ ಬೆಂಗಳೂರಿನ ಜೆ.ಪಿ.ಭವನದಲ್ಲಿ ಆಯೋಜಿಸಿದ್ದರು. ಆದರೆ ಈ ಸಭೆಯನ್ನು ಪಕ್ಷದ ವರಿಷ್ಠ ಹೆಚ್.ಡಿ.ದೇವೇಗೌಡರು ರದ್ದುಗೊಳಿಸಿದ್ದಾರೆ.

ಸಭೆ ರದ್ದಾಗಿರುವ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಭೆ ರದ್ದಾಗಿರಬಹುದು ಆದರೆ ಹಾಸನ ಟಿಕೆಟ್ ವಿಚಾರದಲ್ಲಿ ನನ್ನ ನಿಲುವು ಬದಲಾಗಲ್ಲ. ನಾನು ಮತ್ತೆ ಹಾಸನ ಕಾರ್ಯಕರ್ತರ ಸಭೆ ಕರೆಯುವುದೂ ಇಲ್ಲ ಎಂದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್.ಡಿ.ದೇವೇಗೌಡರು ಕಾರ್ಯಕರ್ತರ ಜೊತೆ ಮಾತನಾಡುತ್ತಿದ್ದಾರೆ. ಅವರಿಗೆ ಆರೋಗ್ಯದ ಸಮಸ್ಯೆಯಿದ್ದರೂ ಚರ್ಚೆ ನಡೆಸಿದ್ದಾರೆ. ಯಾರಿಗೂ ಅವರ ಆರೋಗ್ಯದ ಬಗ್ಗೆ ಕಾಳಜಿ ಇಲ್ಲ. ದೇವೇಗೌಡರಿಗೆ ಕಾರ್ಯಕರ್ತರ ಗೊಂದಲ ಬಗೆಹರಿಸುವ ಶಕ್ತಿಯಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular