HomeKarnatakaಬಳ್ಳಾರಿಯಿಂದ ಬಿ.ಎಸ್.ವೈ. ಸ್ಪರ್ಧೆಗೆ ಬಿಜೆಪಿ ಶಾಸಕ ರೆಡ್ಡಿ ಆಹ್ವಾನ

ಬಳ್ಳಾರಿಯಿಂದ ಬಿ.ಎಸ್.ವೈ. ಸ್ಪರ್ಧೆಗೆ ಬಿಜೆಪಿ ಶಾಸಕ ರೆಡ್ಡಿ ಆಹ್ವಾನ

ಬಳ್ಳಾರಿ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿ ಎಂದು ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ಆಹ್ವಾನ ನೀಡಿದ್ದಾರೆ.

ಯಡಿಯೂರಪ್ಪನವರಿಗೆ ಕ್ಷೇತ್ರ ಬಿಟ್ಟು ಕೊಡುತ್ತೇನೆ. ಅವರು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದು ಸೋಮಶೇಖರ ರೆಡ್ಡಿ ಹೇಳಿದ್ದಾರೆ. ಈ ಕುರಿತಾಗಿ ಸಂಡೂರಿಗೆ ಬಿ.ಎಸ್.ವೈ. ಅವರು ಬಂದಾಗ ಮನವಿ ಮಾಡಿದ್ದೆ. ಬಿಜೆಪಿಗೆ ಯಡಿಯೂರಪ್ಪನವರ ಮಾರ್ಗರ್ಶನ, ಸಲಹೆ ಬೇಕಿದೆ. ಹೀಗಾಗಿ ಅವರು ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿ. ಬಳ್ಳಾರಿ ನಗರದಿಂದ ಕ್ಷೇತ್ರದಿಂದ ಸ್ಪರ್ಧಿಸಿದಲ್ಲಿ ಕ್ಷೇತ್ರ ಬಿಟ್ಟುಕೊಡುತ್ತೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular