HomeKarnatakaBIG NEWS: ಯಡಿಯೂರಪ್ಪನವರಿಗೆ ರಾಜಕೀಯ ಜನ್ಮ ಕೊಟ್ಟ ಕ್ಷೇತ್ರದಿಂದಲೇ ನನ್ನ ರಾಜಕೀಯ ಜೀವನ ಆರಂಭ; ಬಿ.ವೈ.ವಿಜಯೇಂದ್ರಗೆ...

BIG NEWS: ಯಡಿಯೂರಪ್ಪನವರಿಗೆ ರಾಜಕೀಯ ಜನ್ಮ ಕೊಟ್ಟ ಕ್ಷೇತ್ರದಿಂದಲೇ ನನ್ನ ರಾಜಕೀಯ ಜೀವನ ಆರಂಭ; ಬಿ.ವೈ.ವಿಜಯೇಂದ್ರಗೆ ಬಿಜೆಪಿ ಟಿಕೆಟ್ ಖಚಿತ….?

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್.ಯಡಿಯೂರನವರಿಗೆ ಶಿವಮೊಗ್ಗದ ಶಿಕಾರಿಪುರ ಕ್ಷೇತ್ರ ರಾಜಕೀಯ ಜನ್ಮ ಕೊಟ್ಟ ಕ್ಷೇತ್ರ. ಈಗ ಅದೇ ಕ್ಷೇತ್ರದಿಂದ ನನ್ನ ರಾಜಕೀಯ ಜೀವನ ಆರಂಭವಾಗುತ್ತಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಸಕಲ ಸಿದ್ಧತೆಗಳು ನಡೆದಿವೆ. ಯಡಿಯೂರಪ್ಪನವರ ಹುಟ್ಟುಹಬ್ಬಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣ ವಿಶೇಷ ಕೊಡುಗೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿಯೇ ನಾನು ಕೂಡ ಹೋಗುತ್ತೇನೆ. ಬಿ ಎಸ್ ವೈ ಅವರೇ ನಮಗೆ ದೊಡ್ಡ ರಾಜಕೀಯ ಗುರು. ಶಿಕಾರಿಪುರ ಯಡಿಯೂರಪ್ಪನವರಿಗೆ ರಾಜಕೀಯ ಜನ್ಮ ಕೊಟ್ಟಿದೆ. ಅದೇ ಕ್ಷೇತ್ರದಿಂದ ನನ್ನ ರಾಜಕೀಯ ಜೀವನ ಆರಂಭವಾಗುತ್ತದೆ ಎಂದು ಹೇಳಿದರು. ಈ ಮೂಲಕ ಶಿಕಾರಿಪುರದಿಂದ ವಿಜಯೇಂದ್ರಗೆ ಬಿಜೆಪಿ ಟಿಕೆಟ್ ಸಿಗುವುದು ಖಚಿತ ಎಂಬ ಸುಳಿವು ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular