
ನವದೆಹಲಿ: ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐನಿಂದ ವಿಚಾರಣೆ ನಡೆಸಿ ಬಂಧಿಸಲಾಗಿದೆ.
ದೆಹಲಿ ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಆಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ 8 ಗಂಟೆಗಳ ಕಾಲ ದೆಹಲಿಯ ಸಿಬಿಐ ಮುಖ್ಯ ಕಚೇರಿಯಲ್ಲಿ ವಿಚಾರಣೆ ನಡೆಸಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲಾಗಿದೆ.
ಇಂದು ಬೆಳಗ್ಗೆ ಸಿಬಿಐ ವಿಚಾರಣೆಗೆ ಮನೀಶ್ ಸಿಸೋಡಿಯಾ ಆಗಮಿಸಿದ್ದರು. ಈಗ ಹಿಂಪಡೆದಿರುವ ದೆಹಲಿ ಮದ್ಯ ನೀತಿಯಲ್ಲಿನ ಭ್ರಷ್ಟಾಚಾರದ ಆರೋಪದ ಮೇಲೆ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಕೇಂದ್ರ ತನಿಖಾ ದಳ ಬೆಳಗ್ಗೆಯಿಂದಲೇ ವಿಚಾರಣೆ ನಡೆಸಿ ಬಂಧಿಸಿದೆ.
ಏಳೆಂಟು ತಿಂಗಳು ಜೈಲಿನಲ್ಲಿ ಇರಲು ಸಿದ್ಧ ಎಂದು ಸಿಸೋಡಿಯಾ ಈ ಹಿಂದೆ ಹೇಳಿದ್ದರು. ಅವರ ಕುಟುಂಬವನ್ನು ನೋಡಿಕೊಳ್ಳುತ್ತೇವೆ ಎಂದು ಅವರ ಪಕ್ಷದ ಮುಖ್ಯಸ್ಥ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಭರವಸೆ ನೀಡಿದ್ದರು.