HomeKarnatakaಯುವಕರು, ಯುವತಿಯರಿಗೆ ಗುಡ್ ನ್ಯೂಸ್: ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ

ಯುವಕರು, ಯುವತಿಯರಿಗೆ ಗುಡ್ ನ್ಯೂಸ್: ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ

ಬೆಂಗಳೂರು: ನೆಹರು ಯುವ ಕೇಂದ್ರ ಸಂಘಟನೆ, ಬೆಂಗಳೂರು ನಗರ ಜಿಲ್ಲೆ ವತಿಯಿಂದ ರಾಷ್ಟ್ರೀಯ ಯುವ ಸ್ವಯಂ ಸೇವಕರನ್ನು ನೇಮಕ ಮಾಡಿ ಅವರಿಗೆ ತರಬೇತಿ ನೀಡಲು ಗ್ರಾಮೀಣ ಪ್ರದೇಶ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯು ಕನಿಷ್ಠ ಎಸ್.ಎಸ್.ಎಲ್.ಸಿ. ಪಾಸಾಗಿರಬೇಕು. ಹೆಚ್ಚಿನ ವಿದ್ಯಾರ್ಹತೆ ಉಳ್ಳವರಿಗೆ ಆದ್ಯತೆ ನೀಡಲಾಗುವುದು. ವಯೋಮಿತಿ 18-29 ರೊಳಗಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಗೌರವಧನ ನೀಡಲಾಗುವುದು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಸ್ತಕರು ಅರ್ಜಿಗಳನ್ನು ವೆಬ್ ಸೈಟ್ www.nyks.nic.in ಮೂಲಕ ಆನ್ ಲೈನ್ ನಲ್ಲಿ ಮಾರ್ಚ್ 9 ರಂದು ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಯುವ ಅಧಿಕಾರಿ ನೆಹರು ಯುವ ಕೇಂದ್ರ. ಕೈಗಾರಿಕಾ ನಗರ, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ 080-23209157 ಮೂಲಕ ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular