ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಮಾಸಿಕ ಗೌರವಧನವನ್ನು ಕನಿಷ್ಠ 20ರಿಂದ 25 ಸಾವಿರ ರೂ.ಗೆ ಹೆಚ್ಚಳ ಮಾಡಬೇಕೆಂದು ಒತ್ತಾಯಿಸಲಾಗಿದೆ.
ಕಳೆದ ವರ್ಷ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ಗೌರವಧನವನ್ನು ಉತ್ತಮ ರೀತಿಯಲ್ಲಿ ಹೆಚ್ಚಿಸಿದ್ದು, ಅದೇ ರೀತಿ ಪಿಯು ಕಾಲೇಜು ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡಬೇಕೆಂದು ಆಗ್ರಹಿಸಲಾಗಿದೆ.
ಪಿಯು ಉಪನ್ಯಾಸಕರು ವಾರದಲ್ಲಿ ಆರು ದಿನ ಕಾರ್ಯನಿರ್ವಹಿಸುತ್ತಿದ್ದರೂ, ಮಾಸಿಕ 12 ಸಾವಿರ ರೂಪಾಯಿ ಗೌರವಧನ ಮಾತ್ರ ನೀಡಲಾಗುತ್ತಿದೆ. ಇದರಲ್ಲಿ ಕನಿಷ್ಠ ಮಟ್ಟದ ಜೀವನ ನಡೆಸಲು ಆಗುವುದಿಲ್ಲ. ಸರ್ಕಾರ ಇದನ್ನು ಗಮನಿಸಿ ಕನಿಷ್ಠ 20ರಿಂದ 25 ಸಾವಿರ ರೂಪಾಯಿವರೆಗೆ ಗೌರವಧನ ಹೆಚ್ಚಳ ಮಾಡಬೇಕೆಂದು ಸರ್ಕಾರಿ ಪಿಯು ಕಾಲೇಜು ಅತಿಥಿ ಉಪನ್ಯಾಸಕರ ಸಂಘದ ಕಾರ್ಯದರ್ಶಿ ರಾಜೇಶ್ ಭಟ್ ಒತ್ತಾಯಿಸಿದ್ದಾರೆ.