HomeKarnataka80 ಕೆಜಿ ತೂಕದ ಕೇಕ್ ನೊಂದಿಗೆ ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

80 ಕೆಜಿ ತೂಕದ ಕೇಕ್ ನೊಂದಿಗೆ ಯಡಿಯೂರಪ್ಪ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಇಂದು 80ನೇ ವಸಂತಕ್ಕೆ ಕಾಲಿಟ್ಟಿದ್ದು, ಬೆಳಿಗ್ಗೆಯಿಂದಲೇ ಅವರ ನಿವಾಸಕ್ಕೆ ಆಗಮಿಸುತ್ತಿರುವ ಗಣ್ಯರು, ಅಭಿಮಾನಿಗಳು ಶುಭ ಕೋರುತ್ತಿದ್ದಾರೆ.

ರಾಜ್ಯ ಹಾಗೂ ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿರುವ ಯಡಿಯೂರಪ್ಪನವರಿಗೆ ಪಕ್ಷಾತೀತವಾಗಿ ಅಭಿನಂದಿಸುತ್ತಿದ್ದು, ಚುನಾವಣಾ ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯುವಂತೆ ಮನವಿ ಮಾಡುತ್ತಿದ್ದಾರೆ.

ಇದರ ಮಧ್ಯೆ ಶಿವಮೊಗ್ಗ ಮತ್ತು ಭದ್ರಾವತಿ ತಮಿಳು ಸಮುದಾಯದ ಅಭಿಮಾನಿಗಳು ಭಾನುವಾರದಂದು ಯಡಿಯೂರಪ್ಪನವರ ಹುಟ್ಟುಹಬ್ಬ ಆಚರಿಸಿದ್ದು ಇದಕ್ಕಾಗಿ 80 ಕೆಜಿ ತೂಕದ ಕೇಕ್ ತಂದಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕೇಕ್ ನೊಂದಿಗೆ ಶಿವಮೊಗ್ಗದ ವಿನೋಬನಗರದಲ್ಲಿರುವ ಯಡಿಯೂರಪ್ಪನವರ ಮನೆಗೆ ತೆರಳಿ ಕೇಕ್ ಕತ್ತರಿಸಿದ್ದು, ಈ ಸಂದರ್ಭದಲ್ಲಿ ಯಡಿಯೂರಪ್ಪನವರು ತಮ್ಮ ಪುತ್ರರಾದ ಬಿ.ವೈ. ರಾಘವೇಂದ್ರ ಹಾಗೂ ಬಿ.ವೈ. ವಿಜಯೇಂದ್ರ ಅವರಿಗೆ ಕೇಕ್ ತಿನ್ನಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular