
ಕರ್ನಾಟಕದ ಎಲ್ಲಾ ಸಹೋದರ, ಸಹೋದರಿಯರಿಗೆ ನಮಸ್ಕಾರ. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ಎಂದು ಹೇಳುವ ಮೂಲಕ ರಾಷ್ಟ್ರಕವಿ ಕುವೆಂಪು ಅವರನ್ನು ಪ್ರಧಾನಿ ಮೋದಿ ಸ್ಮರಿಸಿದರು.
ಶಿವಮೊಗ್ಗದ ಬಹುದಿನಗಳ ಕನಸು ನನಸಾಗಿದೆ. ಶಿವಮೊಗ್ಗಕ್ಕೆ ಸಾಕಷ್ಟು ಅಭಿವೃದ್ಧಿ ಕಾಮಗಾರಿಗೆ ಇಂದು ಚಾಲನೆ ನೀಡಲಾಗಿದೆ. ಕರ್ನಾಟಕ ಅಭಿವೃದ್ಧಿ ರಥದ ಮೇಲೆ ನಿಂತಿದೆ. ಹೆದ್ದಾರಿ, ಡಿಜಿಟಲ್ ಸಂಪರ್ಕ, ರೈಲ್ವೆ,ರಸ್ತೆ ಇದೆಲ್ಲವೂ ಪ್ರಗತಿಯ ಸಂಕೇತವಾಗಿದೆ. ಇದು ಡಬಲ್ ಎಂಜಿನ್ ಸರ್ಕಾರದ ಸಾಧನೆ ಎಂದರು.

