ಚಿಕ್ಕಮಗಳೂರು: ಮುಳ್ಳುಹಂದಿ ಹಿಡಿಯಲು ಹೋಗಿ ಗುಹೆಯಲ್ಲಿ ಸಿಲುಕಿ ಇಬ್ಬರು ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಆನೆಗುಂದಿ ಬಳಿ ಘಟನೆ ನಡೆದಿದೆ.
ತಮಿಳುನಾಡು ಮೂಲದ ಗೋವಿಂದರಾಜು, ವಿಜಯಕುಮಾರ ಮೃತಪಟ್ಟವರು ಎಂದು ಹೇಳಲಾಗಿದೆ. ಗುಹೆಯೊಳಗೆ ತೆರಳಿದ್ದ ನಾಲ್ವರ ಪೈಕಿ ಇಬ್ಬರು ಸಾವನ್ನಪ್ಪಿದ್ದು, ಮತ್ತಿಬ್ಬರು ಪಾರಾಗಿದ್ದಾರೆ. ತಮಿಳುನಾಡಿನಿಂದ ಕಾಫಿ ತೋಟದ ಕೆಲಸಕ್ಕೆ ಬಂದಿದ್ದ ಕಾರ್ಮಿಕರು ಮುಳ್ಳುಹಂದಿ ಹಿಡಿಯಲು ಹೋಗಿದ್ದರು. ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.