HomeKarnatakaBIG NEWS: ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಜೆಡಿಎಸ್ ತೊರೆಯಲು ಮುಂದಾದ ಮತ್ತೊಬ್ಬ ಶಾಸಕ

BIG NEWS: ವಿಧಾನಸಭಾ ಚುನಾವಣೆ ಹೊಸ್ತಿಲಲ್ಲೇ ಜೆಡಿಎಸ್ ತೊರೆಯಲು ಮುಂದಾದ ಮತ್ತೊಬ್ಬ ಶಾಸಕ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ಪಕ್ಷಾಂತರ ಪರ್ವ ಆರಂಭವಾಗುತ್ತಿದ್ದು, ಈಗಾಗಲೇ ಹಲವು ನಾಯಕರು ತಮ್ಮ ತಮ್ಮ ಮಾತೃ ಪಕ್ಷಗಳನ್ನು ತೊರೆದು ಮತ್ತೊಂದು ಪಕ್ಷವನ್ನು ಸೇರ್ಪಡೆಯಾಗಿದ್ದಾರೆ.

ಇನ್ನು ಹಾಲಿ ಶಾಸಕರುಗಳಾಗಿರುವವರು ವಿಧಾನಸಭಾ ಅಧಿವೇಶನ ಮುಗಿಯುವುದನ್ನೇ ಕಾಯುತ್ತಿದ್ದು, ಇದೀಗ ಪಕ್ಷ ತೊರೆಯುವ ಕುರಿತಂತೆ ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿದ್ದಾರೆ.

ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಯಾಗುವುದು ಖಚಿತವಾಗಿದ್ದು, ಇದರ ಮಧ್ಯೆ ಜೆಡಿಎಸ್ ನ ಮತ್ತೊಬ್ಬ ಶಾಸಕರು ತಾವು ಪಕ್ಷ ತೊರೆಯುವುದನ್ನು ಖಚಿತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರಕಲಗೂಡು ಕ್ಷೇತ್ರದ ಜೆಡಿಎಸ್ ಶಾಸಕ ಎ.ಟಿ. ರಾಮಸ್ವಾಮಿ, ತಾವು ಪಕ್ಷ ತೊರೆಯುವುದನ್ನು ಖಚಿತಪಡಿಸಿದ್ದು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. ಆದರೆ ಯಾವ ಪಕ್ಷದಿಂದ ಎಂಬುದನ್ನು ಕ್ಷೇತ್ರದ ಮತದಾರರು ಹಾಗೂ ಬೆಂಬಲಿಗರೊಂದಿಗೆ ಚರ್ಚಿಸಿ ನಿರ್ಧರಿಸುತ್ತೇನೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular