
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರಧಾನಿ ಮೋದಿ ಆಗಮನದಿಂದಾಗಿ ಕಾಂಗ್ರೆಸ್ ನಾಯಕರು ಭ್ರಮನಿರಸನಗೊಂಡಿದ್ದಾರೆ. ಬಿಜೆಪಿಗೆ ಸಿಗುತ್ತಿರುವ ಜನ ಬೆಂಬಲದಿಂದ ವಿಚಲಿತಗೊಂಡಿದ್ದಾರೆ ಎಂದರು.
ಅಮಿತ್ ಶಾ ಚುನಾವಣಾ ಏಜೆಂಟ್ ರಂತೆ ವರ್ತಿಸುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಟೀಕೆಗೆ ಪ್ರತಿಕ್ರಿಯಿಸಿದ ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಆಗಿ ಈ ರೀತಿ ಮಾತನಾಡುವುದು ಸರಿಯಲ್ಲ. ಹಾಗಾದ್ರೆ ರಾಹುಲ್ ಗಾಂಧಿ ಕಾಂಗ್ರೆಸ್ ಏಜೆಂಟಾ? ಎಂದು ಗುಡುಗಿದರು.

