ಬೆಂಗಳೂರು: ವೀರೇಂದ್ರ ಪಾಟೀಲ್, ನಿಜಲಿಂಗಪ್ಪ ಅವರಿಗೆ ಕಾಂಗ್ರೆಸ್ ನಿಂದ ಅಪಮಾನ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ವೀರೇಂದ್ರ ಪಾಟೀಲ್ ಪರಿಸ್ಥಿತಿ ಏನಿತ್ತು? ಎಂದು ನನಗೆ ಗೊತ್ತು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ವೀರೇಂದ್ರ ಪಾಟೀಲ್ ಪರಿಸ್ಥಿತಿ ಏನಿತ್ತು ಎಂದು ನಮಗೆ ಗೊತ್ತು. ನಾನು ವೀರೇಂದ್ರ ಪಾಟೀಲ್ ಜೊತೆ ಶಾಸಕನಾಗಿದ್ದವನು. ನರೇಂದ್ರ ಮೋದಿ ಅವರಿಗೆ ರಾಜಕೀಯ ಏನೂ ಗೊತ್ತಿಲ್ಲ ಎಂದು ಟಾಂಗ್ ನೀಡಿದ್ದಾರೆ.
ವೀರೇಂದ್ರ ಪಾಟೀಲ್ ಆರೋಗ್ಯ ಚೇತರಿಸಿಕೊಳ್ಳದ ಸ್ಥಿತಿಯಲ್ಲಿದ್ದರು. ಅದನ್ನು ಮಧ್ಯರಾತ್ರಿ ಎಲ್ಲರ ಬಳಿ ಕುಳಿತು ಚರ್ಚಿಸಿದ್ದರು. ವೈದ್ಯರು ಅವರ ಆರೋಗ್ಯ ಸರಿಯಿಲ್ಲ ಎಂದಿದ್ದರು. ಆರೋಗ್ಯ ಸರಿಯಿಲ್ಲದಿದ್ದರಿಂದ ರಾಜೀವ್ ಗಾಂಧಿ ಅವರು ಅವರನ್ನು ಕೆಳಗಿಳಿಸಿದ್ದರು. ಇಂದಿರಾ ಗಾಂಧಿ ವಿರುದ್ಧ ಸ್ಪರ್ಧಿಸಿದವರನ್ನು ಮತ್ತೆ ನಿಲ್ಲಿಸಿದರು. ಲೋಕಾಸಭಾ ಚುನಾವಣೆಯಲ್ಲಿ ನಿಲ್ಲಿಸಿ ಕೇಂದ್ರದಲ್ಲಿ ಮಂತ್ರಿ ಮಾಡಿದರು. ಮಂತ್ರಿ ಮಾಡಿದ ಹೃದಯ ಶ್ರೀಮಂತಿಕೆ ಗಾಂಧಿ ಕುಟುಂಬಕ್ಕೆ ಇತ್ತು ಎಂದರು.
ನಿಜಲಿಂಗಪ್ಪಗೆ ಗೌರವ ಕೊಡಲು ಅಳಿಯನಿಗೆ ಎಂ ಎಲ್ ಸಿ ಮಾಡಿದ್ವಿ. ಬಿಜೆಪಿ ನಾಯಕರ ಸಿಂಪತಿ ನಮಗೆ ಬೇಡ ಎಂದು ತಿಳಿಸಿದರು.