HomeKarnatakaವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟು ಮುಷ್ಕರ ಕೈಗೊಂಡ ಸರ್ಕಾರಿ ನೌಕರರಿಗೆ ಸಿಎಂ ಗುಡ್ ನ್ಯೂಸ್

ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟು ಮುಷ್ಕರ ಕೈಗೊಂಡ ಸರ್ಕಾರಿ ನೌಕರರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ರಸ್ತೆ ಸರ್ಕಾರಿ ನೌಕರರ ಜೊತೆ ಮೊದಲ ಹಂತದಲ್ಲಿ ಚರ್ಚೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ನೌಕರರ ಪರವಾಗಿದೆ. ನೌಕರರು ಸರ್ಕಾರದ ಭಾಗವಾಗಿದ್ದಾರೆ. ಅವರು ಮುಕ್ತವಾಗಿ ಮಾತನಾಡಿದ್ದಾರೆ. ನಾವು ಕೂಡ ಮುಕ್ತವಾಗಿ ಮಾತನಾಡಿದ್ದೇವೆ. ಕೊರೋನಾ ಸಂದರ್ಭದಲ್ಲಿ ಬೇರೆ ರಾಜ್ಯಗಳಲ್ಲಿ ವೇತನ ನೀಡಿರಲಿಲ್ಲ. ನಾವು ವೇತನ ನೀಡಿದ್ದಕ್ಕೆ ನೌಕರರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮಧ್ಯಂತರ ವರದಿ ತರಿಸಿಕೊಂಡು ಆದೇಶ ಮಾಡುವುದಾಗಿ ಹೇಳಿದ್ದೇನೆ. ಅವರು ತಮ್ಮ ಅಹವಾಲು ಹೇಳಿದ್ದಾರೆ ಕೆಲವು ಸಲಹೆಗಳನ್ನೂ ಕೊಟ್ಟಿದ್ದಾರೆ. ನಿಮ್ಮ ಸಂಘದಲ್ಲಿ ನಿರ್ಣಯ ಹೇಳಿ ನಿಮ್ಮ ನಿರ್ಣಯ ಆಧರಿಸಿ ಆನಂತರ ನಾವು ಮುಂದುವರಿಸುತ್ತೇವೆ ಎಂದು ಅವರಿಗೆ ತಿಳಿಸಿದ್ದೇವೆ. ರಾಜ್ಯದ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಮುಂದುವರೆಯುತ್ತೇವೆ. ಈಗ ನಡೆದ ಸಭೆ ಒಂದು ಹಂತಕ್ಕೆ ಬಂದಿದೆ. ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಅವರು ಚರ್ಚೆ ಮಾಡುತ್ತಾರೆ. ಅದನ್ನು ನೋಡಿಕೊಂಡು ನಾವು ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular