ಬೆಳಗಾವಿ: ಸರ್ಕಾರಿ ನೌಕರರ ವೇತನ ಹೆಚ್ಚಳ ಎಂದು ರಾಜ್ಯ ಸರ್ಕಾರ ಸುಳ್ಳು ಹೇಳಿದೆ. ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಬಜೆಟ್ ನಲ್ಲಿ ಘೋಷಣೆ ಮಾಡಿಲ್ಲ. 7ನೇ ವೇತನ ಆಯೋಗದ ವರದಿ ಪಡೆದು ಜಾರಿಗೊಳಿಸಬೇಕಿತ್ತು. ಈಗ ಶೇ.7ರಷ್ಟು ವೇತನ ಹೆಚ್ಚಳ ಎಂದು ಆದೇಶ ಹೊರಡಿಸಿದ್ದಾಗಿ ಹೇಳುತ್ತಿದ್ದಾರೆ. ಆದೇಶ ಜಾರಿಗೆ ಬರುವುದು ಅನುಮಾನ ಎಂದರು.
ಒಂದು ವೇಳೆ ಬಿಜೆಪಿ ಸರ್ಕಾರದಲ್ಲಿ 7ನೇ ವೇತನ ಆಯೋಗ ವರದಿ ಜಾರಿಯಾಗದಿದ್ದಲ್ಲಿ, ಸರ್ಕಾರಿ ನೌಕರರ ಬೇಡಿಕೆಯನ್ನು ಮುಂದಿನ ನಮ್ಮ ಸರ್ಕಾರದಲ್ಲಿ ಈಡೇರಿಸಲಾಗುವುದು ಎಂದು ತಿಳಿಸಿದರು.