ಮೈಸೂರು: ಬೆಂಗಳೂರು-ಮೈಸೂರು ಹೈವೆ ಲೋಕಾರ್ಪಣೆಗೆ ಸಿದ್ಧತೆ ನಡೆಸಲಾಗಿದೆ. ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಹೈವೆ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಎಸ್ ಪಿ ಜಿ ಅನುಮತಿ ಕೊಟ್ಟರೆ ಹೈವೆಯಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸಲಾಗುವುದು. ಒಟ್ಟು 2 ಕೀ.ಮೀ ರೋಡ್ ಶೋ ನಡೆಸಲು ಉದ್ದೇಶಿಸಲಾಗಿದೆ ಎಂದರು.
ಬಳಿಕ ಮಂಡ್ಯದ ಮದ್ದೂರು ತಾಲೂಕಿನ ಗೆಜ್ಜಲಗೆರೆಯಲ್ಲಿ ಬೃಹತ್ ಸಮಾವೇಶ ನಡೆಯುತ್ತದೆ. ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಸುಮಾರು 3,500 ಕೋಟಿ ವೆಚ್ಚದಲ್ಲಿ 115 ಕಿ.ಮೀ ನಿರ್ಮಾಣ ಮಾಡಲಾಗಿದೆ. ಎಕ್ಸ್ ಪ್ರೆಸ್ ವೇಗೆ ಕಾವೇರಿ ಎಕ್ಸ್ ಪ್ರೆಸ್ ವೇ ಎಂದು ಹೆಸರಿಸುವಂತೆ ಅಧಿಕಾರಿಗಳನ್ನು ಸಂಪರ್ಕ ಮಾಡಿದ್ದೇವೆ ಎಂದರು.