HomeKarnatakaBIG NEWS: ಕಾಂಗ್ರೆಸ್ ನಾಯಕತ್ವ ಇಲ್ಲದ ಬಂಜರು ಭೂಮಿ; ಸಚಿವ ಆರ್. ಅಶೋಕ್ ವಾಗ್ದಾಳಿ

BIG NEWS: ಕಾಂಗ್ರೆಸ್ ನಾಯಕತ್ವ ಇಲ್ಲದ ಬಂಜರು ಭೂಮಿ; ಸಚಿವ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ನವರಿಗೆ ನಾಯಕತ್ವದ ಕೊರತೆಯಿದೆ. ಕಾಂಗ್ರೆಸ್ ಪಕ್ಷ ನಾಯಕತ್ವವಿಲ್ಲದ ಬಂಜರು ಭೂಮಿ ಎಂದು ಕಂದಾಯ ಸಚಿವ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಆರ್. ಅಶೋಕ್, ಕಾಂಗ್ರೆಸ್ ನವರು ಮರಭೂಮಿಯಲ್ಲಿ ನೀರು ಹುಡುಕುತ್ತಿದ್ದಾರೆ. ಈ ಚುನಾವಣೆ ಕಾಂಗ್ರೆಸ್ ಗೆ ಅಂತಿಮ ಮೊಳೆ ಹೊಡೆಯುವ ಚುನಾವಣೆ. ನಮ್ಮ ಅಶ್ವಮೇಧದ ಕುದುರೆ ತಡೆಯಲು ಕಾಂಗ್ರೆಸ್ ನಿಂದ ಅಸಾಧ್ಯ. ಬಿಜೆಪಿಗೆ ರಾಜ್ಯದಲ್ಲಿ ನಾಯಕರು ಯಾರು ಎಂದು ಕೇಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಕರ್ನಾಟಕದಲ್ಲಿ ನಮಗೆ ಬಿ.ಎಸ್. ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಾಯಕತ್ವ ಇದೆ. ಕೇಂದ್ರದಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಜೆ.ಪಿ. ನಡ್ಡಾ ಇದ್ದಾರೆ. ಆದರೆ ಅವರ ಪಕ್ಷಕ್ಕೆ ನಾಯಕರು ಯಾರು ಎಂದು ಪ್ರಶ್ನಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular