ಬೆಂಗಳೂರು: ಎಲ್.ಪಿ.ಜಿ. ಸಿಲಿಂಡರ್ ದರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಪಿ.ಸಿ. ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಎಲ್ಪಿಜಿ ಸಿಲಿಂಡರ್ ದರ ಏರಿಕೆಯಿಂದ ಎಲ್ಲರಿಗೂ ಹೊರೆಯಾಗುತ್ತಿದೆ. ಜನಸಾಮಾನ್ಯರು, ಹೋಟೆಲ್ ಮಾಲೀಕರು, ಗ್ರಾಹಕರಿಗೂ ಹೊರಯಾಗುತ್ತಿದೆ. ಈ ಸಂಬಂಧ ಮಾರ್ಚ್ 16 ರಂದು ಕೇಂದ್ರ ಸಚಿವರನ್ನು ಭೇಟಿಯಾಗುತ್ತೇವೆ ಎಂದು ತಿಳಿಸಿದ್ದಾರೆ.
ಗೃಹಬಳಕೆ ಸಿಲಿಂಡರ್ ಗೆ ಶೇಕಡ 5ರಷ್ಟು ಜಿಎಸ್‌ಟಿ ಹಾಕಿದ್ದಾರೆ. ವಾಣಿಜ್ಯ ಬಳಕೆ ಸಿಲಿಂಡರ್ ಗೆ ಶೇಕಡ 18 ರಷ್ಟು ಜಿಎಸ್‌ಟಿ ಹಾಕಿದ್ದಾರೆ. ಸದ್ಯಕ್ಕೆ ಹೋಟೆಲ್ ತಿಂಡಿ ತಿನಿಸುಗಳ ಬೆಲೆ ಏರಿಕೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.