ಬೆಂಗಳೂರು: ಮೇ 20, 21, 22 ರಂದು ಸಿಇಟಿ ಪರೀಕ್ಷೆ ನಡೆಯಲಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿಇಟಿ ವೇಳಾಪಟ್ಟಿಯನ್ನು ಪ್ರಕಟಿಸಿದೆ.
ಮೇ 20ರಂದು ಜೀವಶಾಸ್ತ್ರ, ಗಣಿತ ಪರೀಕ್ಷೆ ನಿಗದಿಯಾಗಿದೆ. ಮೇ 21 ರಂದು ರಸಾಯನ ಶಾಸ್ತ್ರ, ಭೌತಶಾಸ್ತ್ರ ಪರೀಕ್ಷೆ ನಡೆಯಲಿದೆ. ಮೇ 22 ರಂದು ಹೊರನಾಡು, ಗಡಿನಾಡಿನವರಿಗೆ ಕನ್ನಡ ಪರೀಕ್ಷೆ ನಡೆಸಲಾಗುತ್ತದೆ.
ಮಾರ್ಚ್ 2 ರಿಂದ ಮಾರ್ಚ್ 5ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅರ್ಜಿ ಶುಲ್ಕ ಪಾವತಿಗೆ ಮಾರ್ಚ್ 7 ಕೊನೆಯ ದಿನವಾಗಿದೆ ಎಂದು ಹೇಳಲಾಗಿದೆ.