HomeKarnatakaBIG NEWS: ಪ್ರಜಾಧ್ವನಿ ಯಾತ್ರೆ ದಿಢೀರ್ ರದ್ದುಗೊಳಿಸಿದ ಸಿದ್ದರಾಮಯ್ಯ

BIG NEWS: ಪ್ರಜಾಧ್ವನಿ ಯಾತ್ರೆ ದಿಢೀರ್ ರದ್ದುಗೊಳಿಸಿದ ಸಿದ್ದರಾಮಯ್ಯ

ಬೆಳಗಾವಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಏಕಾಏಕಿ ಪ್ರಜಾಧ್ವನಿ ಯಾತ್ರೆಯನ್ನು ರದ್ದುಗೊಳಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಎರಡು ದಿನಗಳಿಂದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ರಜಾಧ್ವನಿ ಯಾತ್ರೆಯಲ್ಲಿ ಪಾಲ್ಗೊಂಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಇಂದಿನ ಯಾತ್ರೆಯನ್ನು ರದ್ದುಗೊಳಿಸಿದ್ದು, ಬೆಳಗಾವಿಯ ಹೋಟೇಲ್ ನಲ್ಲಿ ಇದ್ದು, ಟಿಕೆಟ್ ಹಂಚಿಕೆ ಬಗ್ಗೆ ಜಿಲ್ಲಾ ಪ್ರಮುಖರೊಂದಿಗೆ ಚರ್ಚೆ ನಡೆಸಿದ್ದಾರೆ.

ನಿಪ್ಪಾಣಿ, ಯಮಕನಮರಡಿ ಕ್ಷೇತ್ರಗಳಲ್ಲಿ ಇಂದು ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಅಲ್ಲದೇ ಸಾಮಾವೇಶ ಕೂಡ ಆಯೋಜಿಸಲಾಗಿತ್ತು. ಆದರೆ ದಿಢೀರ್ ಆಗಿ ಎರಡೂ ಕ್ಷೇತ್ರಗಳ ಪ್ರಜಾಧ್ವನಿ ಯಾತ್ರೆ, ಸಮವೇಶವನ್ನು ರದ್ದುಗೊಳಿಸಿದ್ದಾರೆ. ಸಂಜೆ 6ಗಂಟೆಗೆ ಹುಕ್ಕೇರಿಯಲ್ಲಿ ನಡೆಯಲಿರುವ ಪ್ರಜಾಧ್ವನಿ ಸಮಾವೇಶದಲ್ಲಿ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular