ಬೆಂಗಳೂರು: ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಪತಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಂಗಳೂರಿನ ಕೋಣನಕುಂಟೆ ಮನೆಯಲ್ಲಿ ನಡೆದಿದೆ.
ಪತ್ನಿ ಹಾಗೂ ಇಬ್ಬರು ಹೆಣ್ಣುಮಕ್ಕಳು ಸಾವನ್ನಪ್ಪಿದ್ದು, ಪತಿಯ ಸ್ಥಿತಿ ಗಂಭೀರವಾಗಿದೆ. ಪತ್ನಿ ವಿಜಯಾ (28), ಪುತ್ರಿಯರಾದ ನಿಷಾ (7), ದೀಕ್ಷಾ (5) ಮೃತರು.
ಪತಿ ನಾಗೇಂದ್ರ ಅಸ್ವಸ್ಥನಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಕೋಣನಕುಂಟೆಯ ಮನೆಯಲ್ಲಿ ಈ ಘಟನೆ ನಡೆದಿದೆ.