HomeKarnatakaBIG NEWS: ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ಸಾಧುಕೋಕಿಲ ನೇಮಕ

BIG NEWS: ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ಸಾಧುಕೋಕಿಲ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ‘ಸಾಂಸ್ಕೃತಿಕ ಘಟಕ’ ದ ಅಧ್ಯಕ್ಷರನ್ನಾಗಿ ನಟ, ಸಂಗೀತ ನಿರ್ದೇಶಕ ಸಾಧುಕೋಕಿಲ ಅವರನ್ನು ನೇಮಕ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಕುರಿತಂತೆ ಆದೇಶ ಹೊರಡಿಸಿದ್ದು, ಪ್ರದೇಶ ಕಾಂಗ್ರೆಸ್ ಸಮಿತಿ ಮಾರ್ಗದರ್ಶನದಲ್ಲಿ ಮತ್ತು ರಾಜ್ಯ ನಾಯಕರ ಸಹಕಾರದೊಂದಿಗೆ ಸಾಂಸ್ಕೃತಿಕ ಘಟಕದ ಸಂಘಟನೆ ಹಾಗೂ ಆ ಮೂಲಕ ಪಕ್ಷದ ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂಬರುವ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ಸಾಧುಕೋಕಿಲ ಅವರಿಗೆ ಮಹತ್ವದ ಜವಾಬ್ದಾರಿಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನೀಡಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular