
ಈ ವಿಡಿಯೋ ಕುರಿತಂತೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದು, ಕಾಂಗ್ರೆಸ್ ನಲ್ಲಿ ಹಣ ಕೊಟ್ಟು ಸಭೆಗೆ ಕರೆದುಕೊಂಡು ಬರುವ ಸಂಪ್ರದಾಯವಿಲ್ಲ. ಸಿದ್ದರಾಮಯ್ಯನವರು ಬಿಜೆಪಿಯವರು ಈ ರೀತಿ ಮಾಡುತ್ತಿರುವ ಕುರಿತು ಮಾತನಾಡಿದ್ದಾರೆ ಎಂದು ಹೇಳಿದ್ದಾರೆ.
ಯಾದಗಿರಿ ತಾಲೂಕಿನ ಮುಗಂದಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ ವೇಳೆ ಬಿಜೆಪಿಯವರು ಹಣ ನೀಡಿಲ್ಲವೆಂದು ಕೆಲವರು ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್ ಎಂದಿಗೂ ಇಂತಹ ಕೆಲಸ ಮಾಡಿಕೊಂಡು ಬಂದಿಲ್ಲ ಎಂದು ತಿಳಿಸಿದರು.

