HomeKarnatakaBIG NEWS: ಶಿವಾಜಿ ಪ್ರತಿಮೆಗೆ ಹಣ ಬಿಡುಗಡೆ ಮಾಡಿದ್ದು ನಾನು ಎಂದ ಗಾಲಿ ಜನಾರ್ಧನರೆಡ್ಡಿ

BIG NEWS: ಶಿವಾಜಿ ಪ್ರತಿಮೆಗೆ ಹಣ ಬಿಡುಗಡೆ ಮಾಡಿದ್ದು ನಾನು ಎಂದ ಗಾಲಿ ಜನಾರ್ಧನರೆಡ್ಡಿ

ಕೊಪ್ಪಳ: ಗಡಿ ಜಿಲ್ಲೆ ಬೆಳಗಾವಿಯಲ್ಲಿ ಇಂದು ಲೋಕಾರ್ಪಣೆಯಾದ ಶಿವಾಜಿ ಮಹಾರಾಜರ ಬೃಹತ್ ಪ್ರತಿಮೆ ಅನಾವರಣ, ಅನುದಾನ ಬಿಡುಗಡೆ ವಿಚಾರ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರ ನಡುವಿನ ಪ್ರತಿಷ್ಠೆಯ ವಿಚಾರವಾಗಿ ಫೈಟ್ ಆರಂಭವಾಗಿದೆ. ಈ ಮಧ್ಯೆ ಶಿವಾಜಿ ಪ್ರತಿಮೆಗೆ ಅನುದಾನ ಬಿಡುಗಡೆ ಮಾಡಿದ್ದು ನಾನು ಎಂದು ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಹೇಳಿದ್ದಾರೆ.

ಕೊಪ್ಪಳದ ಗಂಗಾವತಿಯಲ್ಲಿ ಮಾತನಾಡಿದ ಜನಾರ್ಧನ ರೆಡ್ಡಿ, ಶಿವಾಜಿ ಪ್ರತಿಮೆ ನಿರ್ಮಾಣಕ್ಕೆ ನಾನು 11 ಕೋಟಿ ಅನುದಾನ ಬಿಡುಗಡೆ ಮಾಡಿದ್ದೆ. ಹಿಂದೆ ಬಿ.ಎಸ್. ಯಡಿಯೂರಪ್ಪ ಸಿಎಂ ಆಗಿದ್ದಾಗ ನಾನು ಪ್ರವಾಸೋದ್ಯಮ ಸಚಿವನಾಗಿದ್ದೆ. ಆ ವೇಳೆ ಹಣ ಬಿಡುಗಡೆ ಮಾಡಿದ್ದೆ ಎಂದಿದ್ದಾರೆ.

ಈ ಮೂಲಕ ಜನರು ನೂರಾರು ವರ್ಷಗಳ ಕಾಲ ನೆನಪಿಡುವಂತಹ ಕೆಲಸಗಳನ್ನು ನಾನು ಮಾಡಿದ್ದೇನೆ ಎಂದು ರೆಡ್ಡಿ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular