alex Certify ಲಂಚ ಪಡೆದ ಮುಖಂಡರು ಪಕ್ಷದಿಂದಲೇ ಹೊರಕ್ಕೆ: ಸುರ್ಜೆವಾಲಾ ಎಚ್ಚರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಲಂಚ ಪಡೆದ ಮುಖಂಡರು ಪಕ್ಷದಿಂದಲೇ ಹೊರಕ್ಕೆ: ಸುರ್ಜೆವಾಲಾ ಎಚ್ಚರಿಕೆ

ಮಡಿಕೇರಿ: ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಲಂಚ ಮುಕ್ತ ಕರ್ನಾಟಕ ಗುರಿ ಹೊಂದಿದ್ದು, ಪಕ್ಷದ ಯಾವುದೇ ನಾಯಕರು ಲಂಚ ಪಡೆದಿರುವುದು ಗೊತ್ತಾದಲ್ಲಿ ಪಕ್ಷದಿಂದಲೇ ಹೊರಗೆ ಕಳಿಸಲಾಗುವುದು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ ಎಚ್ಚರಿಕೆ ನೀಡಿದ್ದಾರೆ.

ಮಡಿಕೇರಿಯ ಅಂಬೇಡ್ಕರ್ ಭವನದಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಇನ್ನು 10 ದಿನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಜನ ವಿರೋಧಿ ಆಡಳಿತ ನಡೆಸುತ್ತಿದೆ. ಪ್ರಧಾನಿ ಮೋದಿ ಮತ್ತು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಪದೇಪದೇ ರಾಜ್ಯಕ್ಕೆ ಕರೆಸಿಕೊಂಡು ಸುಳ್ಳು ಪ್ರಚಾರ ನಡೆಸುತ್ತಿದೆ. ಈ ಮೂಲಕ ಜನರ ವಿಶ್ವಾಸ ಪಡೆಯಲು ಹೆಣಗಾಡುತ್ತಿದೆ ಎಂದು ಟೀಕಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...