ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಪಕ್ಷಾಂತರ ಪರ್ವವೂ ಆರಂಭವಾಗುತ್ತಿದ್ದು, ಜೆಡಿಎಸ್ ಶಾಸಕ ಶಿವಲಿಂಗೇಗೌಡ, ಚುನಾವಣಾ ನೀತಿ ಸಂಹಿತೆ ಜಾರಿಗೊಂಡ ಬಳಿಕ ತಾವು ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಬಹಿರಂಗವಾಗಿಯೇ ಹೇಳಿಕೆ ನೀಡಿದ್ದಾರೆ.
ಜೆಡಿಎಸ್ ನ ಮತ್ತೊಬ್ಬ ಶಾಸಕ ಎ.ಟಿ. ರಾಮಸ್ವಾಮಿ ಕೂಡ ಪಕ್ಷ ತೊರೆಯುವುದು ಖಚಿತವಾಗಿದ್ದು, ಅವರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದರ ಮಧ್ಯೆ ಸಚಿವ ನಾರಾಯಣಗೌಡ, ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇದಕ್ಕೆ ಪುಷ್ಟಿ ನೀಡುವಂತೆ ಕೆ ಆರ್ ನಗರದಲ್ಲಿ ಮಾತನಾಡಿರುವ ನಾರಾಯಣಗೌಡ, ತಮಗೆ ಕಾಂಗ್ರೆಸ್ ಸೇರ್ಪಡೆಯಾಗಿ ಚುನಾವಣೆಗೆ ಸ್ಪರ್ಧಿಸಲು ಆಹ್ವಾನ ಬಂದಿದೆ. ಹೀಗಾಗಿ ಆಪ್ತರು, ಹಿತೈಷಿಗಳೊಂದಿಗೆ ಚರ್ಚಿಸಿ ಜನಾಭಿಪ್ರಾಯ ಸಂಗ್ರಹಿಸಿದ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ.