ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಕಚೇರಿ ಮತ್ತು ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಬರೋಬ್ಬರಿ 7.62 ಕೋಟಿ ರೂ. ನಗದು ಪತ್ತೆಯಾಗಿದೆ.
40 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗಲೇ ಶಾಸಕರ ಪುತ್ರನಾಗಿರುವ ಬಿಡಬ್ಲ್ಯೂಎಸ್ಎಸ್ಬಿ ಮುಖ್ಯ ಲೆಕ್ಕಾಧಿಕಾರಿ ಪ್ರಶಾಂತ್ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಪರಿಶೀಲನೆ ಆರಂಭಿಸಿದ ಲೋಕಾಯುಕ್ತ ಅಧಿಕಾರಿಗಳಿಗೆ ಮನೆ ಹಾಗೂ ಕಚೇರಿಯಲ್ಲಿ ಬರೋಬ್ಬರಿ 7.62 ಕೋಟಿ ರೂ. ನಗದು ಪತ್ತೆಯಾಗಿದೆ.
ಮಾಡಾಳ್ ಪ್ರಶಾಂತ್ ಸೇರಿದಂತೆ ಐವರನ್ನು ಬಂಧಿಸಲಾಗಿದೆ. ಪ್ರಶಾಂತ್ ಸಂಬಂಧಿ ಸಿದ್ದೇಶ್, ಅಕೌಂಟೆಂಟ್ ಸುರೇಂದ್ರ ಹಾಗೂ ಹಣಕೊಡಲು ಬಂದಿದ್ದ ನಿಕೋಲಸ್ ಮತ್ತು ಗಂಗಾಧರ ಎಂಬುವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ಅವರನ್ನು ಲೋಕಾಯುಕ್ತ ಕೋರ್ಟ್ ಮುಂದೆ ಹಾಜರುಪಡಿಸಲಿದ್ದು, ವಿಚಾರಣೆಗಾಗಿ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡುವ ಸಾಧ್ಯತೆ ಇದೆ.