HomeCrimeಅಪ್ಪನಿಂದಲೇ ಅಶ್ಲೀಲ ಬೈಗುಳ; ಮನನೊಂದು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತೆ

ಅಪ್ಪನಿಂದಲೇ ಅಶ್ಲೀಲ ಬೈಗುಳ; ಮನನೊಂದು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತೆ

ಮಹಾರಾಷ್ಟ್ರದಲ್ಲೊಂದು ಆಘಾತಕಾರಿ ಘಟನೆ ನಡೆದಿದೆ. ತನ್ನ ತಂದೆ ತನಗೆ ಅಶ್ಲೀಲವಾಗಿ ಬೈಯುತ್ತಿದ್ದರು ಎಂಬ ಕಾರಣಕ್ಕೆ ಮನನೊಂದ 14 ವರ್ಷದ ಬಾಲಕಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಪಾಲ್ಗಾರ್ ಜಿಲ್ಲೆಯ ವಸೈ ತಾಲೂಕಿನಲ್ಲಿ ಮೂರು ದಿನಗಳ ಹಿಂದೆ ಬಾಲಕಿ ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿತ್ತು. ಆದರೆ ಗುರುವಾರದಂದು ಬಾಲಕಿ ಬರೆದಿಟ್ಟಿದ್ದ ಡೆತ್ ನೋಟ್ ಪತ್ತೆಯಾಗಿದ್ದು, ಆತ್ಮಹತ್ಯೆ ಹಿಂದಿನ ಅಸಲಿ ಕಾರಣ ಬಹಿರಂಗವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಾಲಕಿಯನ್ನು ತಂದೆ ಅಶ್ಲೀಲವಾಗಿ ನಿಂದಿಸುತ್ತಿದ್ದರು ಎನ್ನಲಾಗಿದ್ದು, ತನ್ನ ನೋವನ್ನು ತಾಯಿ ಬಳಿ ಹೇಳಿಕೊಂಡರೂ ಯಾವುದೇ ಸ್ಪಂದನೆ ಸಿಕ್ಕಿಲ್ಲ. ಅಂತಿಮವಾಗಿ ಆಕೆ ಕಠಿಣ ನಿರ್ಧಾರ ಕೈಗೊಂಡಿದ್ದು, ತನ್ನ ತಂದೆಗೆ ತಕ್ಕ ಶಿಕ್ಷೆ ಆಗಬೇಕೆಂದು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾಳೆ.

ಇದೀಗ ಪೊಲೀಸರು ಬಾಲಕಿಯ ಡೆತ್ ನೋಟ್ ಆಧಾರದ ಮೇಲೆ ಆಕೆಯ ತಂದೆ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲು ಮುಂದಾಗಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular