HomeKarnatakaBIG NEWS: ಕೆ ಎಸ್ ಡಿ ಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಾಳ್ ವಿರೂಪಾಕ್ಷಪ್ಪಗೆ...

BIG NEWS: ಕೆ ಎಸ್ ಡಿ ಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಾಳ್ ವಿರೂಪಾಕ್ಷಪ್ಪಗೆ ಸಿಎಂ ಸೂಚನೆ

ಬೆಂಗಳೂರು: ಬಿಜೆಪಿ ಶಾಸಕ, ಕೆ ಎಸ್ ಡಿ ಎಲ್ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ರಾಜೀನಾಮೆ ನಿಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.

ಕೆ ಎಸ್ ಡಿ ಎಲ್ ಅಧ್ಯಕ್ಷ ಸ್ಥಾನಕ್ಕೆ ಇಂದು ಸಂಜೆಯೊಳಗೆ ರಾಜೀನಾಮೆ ನೀಡುವಂತೆ ಸಿಎಂ ಬೊಮ್ಮಾಯಿ ಖಡಕ್ ಸೂಚನೆ ನೀಡಿದ್ದಾರೆ.

ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಕಚೇರಿ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿ ದಾಳಿ ನಡೆಸಿದ್ದು ಬರೋಬ್ಬರಿ 7.62 ಕೊಟಿ ಹಣ ವಶಕ್ಕೆ ಪಡೆದಿದ್ದು, ಪ್ರಶಾಂತ್ ಸೇರಿ ಐವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದರ ಬೆನ್ನಲ್ಲೇ ಇಂದು ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಮನೆ ಮೇಲೂ ದಾಳಿ ನಡೆಸುವ ಸಾಧ್ಯತೆ ಇದ್ದು, ಲೋಕಾಯುಕ್ತ ಅಧಿಕಾರಿಗಳು ಅವರನ್ನೂ ಬಂಧಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬೆಳವಣಿಗೆ ನಡುವೆಯೇ ಸಿಎಂ ಬೊಮ್ಮಾಯಿ, ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ರಾಜಿನಾಮೆ ನೀಡುವಂತೆ ತಿಳಿಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular