HomeKarnatakaBIG NEWS: ಕೆ ಎಸ್ ಡಿ ಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

BIG NEWS: ಕೆ ಎಸ್ ಡಿ ಎಲ್ ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ

ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆ ಮೇಲೆ ಲೊಕಾಯುಕ್ತ ದಾಳಿ ಹಿನ್ನೆಲೆಯಲ್ಲಿ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ನಿಗಮ-KSDL ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದಾರೆ.

ಸಿಎಂ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿರುವ ಮಾಡಾಳ್ ವಿರೂಪಾಕ್ಷಪ್ಪ ಕೆ ಎಸ್ ಡಿ ಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡುವುದಾಗಿ ತಿಳಿಸಿದ್ದಾರೆ. ಲೋಕಾಯುಕ್ತ ದಾಳಿಗೂ ನನಗೂ ಯಾವುದೇ ಸಂಬಂಧವಿಲ್ಲ. ನನ್ನ ಹಾಗೂ ಕುಟುಂಬದ ವಿರುದ್ಧ ಷಡ್ಯಂತ್ರ ನಡೆಸಲಾಗುತ್ತಿದೆ. ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದೇ ವೇಳೆ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ನಿವಾಸದ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular