BIG NEWS: ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು ? ಮೋದಿ-ಶಾ ಜೋಡಿಗೆ ಕರ್ನಾಟಕ ಎಟಿಎಂ ಆಗಿದೆಯೇ ? ಬಿಜೆಪಿಗೆ ಕಾಂಗ್ರೆಸ್ ಖಡಕ್ ಪ್ರಶ್ನೆ

ಬೆಂಗಳೂರು: ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ…! ಒಬ್ಬ ಶಾಸಕರದ್ದೇ ಈ ಪರಿ ಲೂಟಿ ಇರುವಾಗ ಮಂತ್ರಿಗಳ ಲೂಟಿ ಇನ್ನೆಷ್ಟು? ಎಂದು ರಾಜ್ಯ ಕಾಂಗ್ರೆಸ್ ಟೀಕಾಪ್ರಹಾರ ನಡೆಸಿದೆ.

ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್ ಮನೆಯಲ್ಲಿ ಲೋಕಾಯುಕ್ತ ದಾಳಿ ವೇಳೆ ಸಿಕ್ಕ ಕಂತೆ ಕಂತೆ ಹಣದ ವಿಚಾರವಾಗಿ ಸರಣಿ ಟ್ವೀಟ್ ಮೂಲಕ ಕೆಂಡ ಕಾರಿರುವ ಕಾಂಗ್ರೆಸ್, ಇಂದು ಅಮಿತ್ ಶಾ ಬರುತ್ತಿರುವುದಕ್ಕೂ, ಈ ನಿಧಿ ಸಂಗ್ರಹಕ್ಕೂ ಸಂಬಂಧವಿದೆಯೇ ? ಅಮಿತ್ ಶಾ ಬರುತ್ತಿರುವುದೇ ಇಲ್ಲಿನ ‘ಸಂಪತ್ತು’ ಕೊಂಡೊಯ್ಯುವುದಕ್ಕಾ ? ಎಂದು ಪ್ರಶ್ನಿಸಿದೆ.

ಶಾಸಕರ ಮನೆಯಲ್ಲಿ ಸಿಕ್ಕ ಹಣದ ರಹಸ್ಯವೇನು ? ಈ ಹಣ PayCM ಗೆ ತಲುಪಿಸುವುದಕ್ಕಾ ಅಥವಾ PayPM ಗೆ ತಲುಪಿಸುವುದಕ್ಕಾ ? ಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಮೋದಿ-ಶಾ ಜೋಡಿಗೆ ಕರ್ನಾಟಕ ಎಟಿಎಂ ಆಗಿದೆಯೇ ? ಸಂಪತ್ತಿನ ಕ್ರೋಡೀಕರಣಕ್ಕಾಗಿಯೇ 40% ಕಮಿಷನ್ ಬಗ್ಗೆ ಮೋದಿ, ಶಾ ಮಾತಾಡುತ್ತಿಲ್ಲವೇ ? ಎಂದು ಹಿಗ್ಗಾಮುಗ್ಗಾ ತಿರುಗೇಟು ನೀಡಿದೆ.

“ನಾ ಖಾವುಂಗಾ, ನಾ ಖಾನೆದುಂಗಾ” ಎನ್ನುವ ಪ್ರಧಾನಿ ಮೋದಿಯವರೇ ಇಲ್ಲಿರುವುದು ಡಬಲ್ ಇಂಜಿನ್ ಸರ್ಕಾರವಲ್ಲ, ಡಬಲ್ ಲೂಟಿಯ ಸರ್ಕಾರ. ನಿಮ್ಮವರ ಲೂಟಿ ಸಾಧನೆಯನ್ನು ಕಣ್ತುಂಬಿಕೊಳ್ಳಲೆಂದೇ ಕರ್ನಾಟಕಕ್ಕೆ ತಿಂಗಳಿಗೆ ಮೂರು ಬಾರಿ ಬರುತ್ತಿರುವಿರಾ? “ಶಬಾಷ್” ಎಂದು ಬಿಜೆಪಿ ಭ್ರಷ್ಟರ ಬೆನ್ನು ತಟ್ಟಿ ಹೋಗುವಿರಾ? ಎಂದು ಪ್ರಶ್ನಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read