ಅನಾರೋಗ್ಯದ ಹಿನ್ನೆಲೆಯಲ್ಲಿ ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಗುರುವಾರದಂದು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ತಿಳಿದು ಬಂದಿದೆ.
76 ವರ್ಷದ ಸೋನಿಯಾ ಗಾಂಧಿಯವರು ನವದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ತಜ್ಞ ವೈದ್ಯ ಅರುಪ್ ಬಸು ಮತ್ತವರ ತಂಡ ತಪಾಸಣೆ ನಡೆಸುತ್ತಿದೆ.
ಶುಕ್ರವಾರದಂದು ಗಂಗಾರಾಮ್ ಆಸ್ಪತ್ರೆಯ ಚೇರ್ಮನ್ ಡಾ. ಡಿ.ಎಸ್ ರಾಣಾ ಈ ಕುರಿತಂತೆ ಮಾಹಿತಿ ನೀಡಿದ್ದು, ಸೋನಿಯಾ ಗಾಂಧಿಯವರ ಆರೋಗ್ಯ ಸ್ಥಿರವಾಗಿದೆ. ಕಳವಳಪಡಬೇಕಾದ ಅಗತ್ಯವಿಲ್ಲ ಎಂದು ಹೇಳಿದ್ದಾರೆ.