ಬೆಂಗಳೂರು: ಲೋಕಾಯುಕ್ತ ದಾಳಿ ಬೆನ್ನಲ್ಲೇ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಐಟಿ ಮತ್ತು ಇಡಿ ತನಿಖೆಯ ಉರುಳು ಸುತ್ತಿಕೊಂಡಿದೆ. ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಕಚೇರಿ ಮತ್ತು ನಿವಾಸದಲ್ಲಿ 8 ಕೋಟಿ ರೂ.ಗೂ ಅಧಿಕ ಹಣ ಪತ್ತೆಯಾಗಿದೆ. ದಾಳಿ ಬೆನ್ನಲ್ಲೇ KSDL ಅಧ್ಯಕ್ಷ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ರಾಜೀನಾಮೆ ನೀಡಿದ್ದು, ಎ1 ಆರೋಪಿಯಾಗಿರುವ ಅವರಿಗಾಗಿ ಲೋಕಾಯುಕ್ತ ಪೊಲೀಸರು ಹುಡುಕಾಟ ನಡೆಸಿದ್ದಾರೆ.
8 ಕೋಟಿ ರೂ.ಗೂ ಅಧಿಕ ಅನಧಿಕೃತ ಹಣ ಪತ್ತೆಯಾಗಿದ್ದು, ಇಡಿ ಅಕ್ರಮ ಹಣ ವರ್ಗಾವಣೆ ಆರೋಪದಡಿ ಪ್ರಕರಣ ದಾಖಲಿಸಿಕೊಂಡು ಆರಂಭಿಸಲಿದೆ. ಈಗಾಗಲೇ ಜಾರಿ ನಿರ್ದೇಶನಾಲಯಕ್ಕೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ ಎಂದು ಹೇಳಲಾಗಿದೆ.