HomeKarnatakaBIG NEWS: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಂಜಯ್ ಪಾಟೀಲ್ ಗಂಭೀರ ಆರೋಪ

BIG NEWS: ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸಂಜಯ್ ಪಾಟೀಲ್ ಗಂಭೀರ ಆರೋಪ

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬೆಳಗಾವಿ ರಾಜಕೀಯ ಅಖಾಡ ದಿನದಿಂದ ದಿನಕ್ಕೆ ಕಾವೇರುತ್ತಿದೆ. ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ನಾಯಕರು ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಸೋತಿದ್ದ ಸಂಜಯ್ ಪಾಟೀಲ್ ಈಗ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಗುರುತರ ಆರೋಪ ಮಾಡಿದ್ದಾರೆ. 20-30 ವರ್ಷಗಳ ಹಿಂದೆ ಲಕ್ಷ್ಮಿ ಹೆಬ್ಬಾಳ್ಕರ್ ತನ್ನ ಕಚೇರಿಗೆ ಬಂದು 50,000 ರೂಪಾಯಿ ಕೈ ಸಾಲ ತೆಗೆದುಕೊಂಡಿದ್ದರು. ಅಂದು 50,000 ಸಾಲ ಪಡೆದುಕೊಂಡು ಹೋದ ಲಕ್ಷ್ಮಿ ಹೆಬ್ಬಾಳ್ಕರ್ ಇಂದು 500 ಕೋಟಿ ಒಡತಿಯಾಗಿದ್ದು ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಅಂದು 50 ಸಾವಿರ ಪಡೆದುಕೊಂಡು ಹೋದವರು ಆ ಹಣವನ್ನೂ ವಾಪಸ್ ಕೊಡಲಿಲ್ಲ. ಇಂದು ಲಕ್ಷ್ಮಿ ಹೆಬ್ಬಾಳ್ಕರ್ 500 ಕೋಟಿ ಒಡತಿಯಾಗಿದ್ದಾರೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular