HomeIndiaBIG NEWS: 97 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಒಂದೇ ದಿನ 300 ಜನರಲ್ಲಿ...

BIG NEWS: 97 ದಿನಗಳ ಬಳಿಕ ಇದೇ ಮೊದಲ ಬಾರಿಗೆ ಒಂದೇ ದಿನ 300 ಜನರಲ್ಲಿ ಕೊರೊನಾ ಸೋಂಕು ಪತ್ತೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ದಿಢೀರ್ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 300 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

97 ದಿನಗಳ ಬಳಿಕ ದೇಶದಲ್ಲಿ ಒಂದೇ ದಿನದಲ್ಲಿ 300 ಜನರಲ್ಲಿ ಕೋವಿಡ್ ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚುವ ಆತಂಕ ಎದುರಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದೇಶದಲ್ಲಿ ಈವರೆಗೆ 5,30,775 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ದೇಶದಲ್ಲಿ 2,686 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಶೇ.98.80ರಷ್ಟು ಜನ ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 4,41,54,035 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.

ನಿನ್ನೆ 06,977 ಜನರಿಗೆ ವ್ಯಾಕ್ಸಿನ್ ನೀಡಲಾಗಿದ್ದು, ದೇಶದಲ್ಲಿ ಈವರೆಗೆ 220,64,15,484 ಡೋಸ್ ಲಸಿಕೆ ಹಾಕಲಾಗಿದೆ. 24 ಗಂಟೆಯಲ್ಲಿ 1,03,170 ಜನರಿಗೆ ಕೋವಿಡ್ ಟೆಸ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular