HomeKarnatakaBIG NEWS: ಮಾಜಿ ಸಿಎಂ ಎಸ್.ಎಂ. ಕೃಷ್ಣ ಭೇಟಿಯಾದ ಸಂಸದೆ ಸುಮಲತಾ ಹೇಳಿದ್ದೇನು ?

BIG NEWS: ಮಾಜಿ ಸಿಎಂ ಎಸ್.ಎಂ. ಕೃಷ್ಣ ಭೇಟಿಯಾದ ಸಂಸದೆ ಸುಮಲತಾ ಹೇಳಿದ್ದೇನು ?

ಬೆಂಗಳೂರು: ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಸೇರಲಿದ್ದಾರೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದ್ದು, ಈ ಬೆಳವಣಿಗೆಗಳ ಮಧ್ಯೆ ಇಂದು ಸುಮಲತಾ ಮಾಜಿ CM ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾಗಿದ್ದಾರೆ.

ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಮಾಜಿ ಸಿಎಂ ಎಸ್.ಎಂ. ಕೃಷ್ಣ ಅವರನ್ನು ಭೇಟಿಯಾದ ಸುಮಲತಾ ಕೆಲ ಕಾಲ ಚರ್ಚೆ ನಡೆಸಿದ್ದಾರೆ. ಈ ಮೂಲಕ ಸುಮಲತಾ ಬಿಜೆಪಿ ಸೇರ್ಪಡೆ ವಿಚಾರ ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಎಸ್.ಎಂ. ಕೃಷ್ಣ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಎಸ್.ಎಂ. ಕೃಷ್ಣ ಅವರಿಗೆ ಪದ್ಮ ವಿಭೂಷಣ ಗೌರವ ಸಿಕ್ಕಿರುವ ಹಿನ್ನೆಲೆಯಲ್ಲಿ ಅಭಿನಂದನೆ ಸಲ್ಲಿಸಲು ಭೇಟಿಯಾಗಿದ್ದೆ. ಈ ವೇಳೆ ಯಾವುದೇ ರಾಜಕೀಯ ವಿಚಾರದ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಿಜೆಪಿ ಸೇರ್ಪಡೆ ವಿಚಾರವಾಗಿ ಇನ್ನೂ ನಾನು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಮಂಡ್ಯದಿಂದ ಹಲವರು ಆಗಮಿಸಿದ್ದಾರೆ, ಅವರೊಂದಿಗೆ ಚರ್ಚಿಸಿ ನಿರ್ಧರಿಸುತ್ತೇನೆ. ನನ್ನ ಲಾಭ, ನಷ್ಟ ನೋಡಿ ತೀರ್ಮಾನಿಸಲ್ಲ, ನನ್ನ ಜೊತೆ ಇರುವವರನ್ನು ನೋಡಿಕೊಂಡು ತೀರ್ಮಾನ ಮಾಡಬೇಕಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಎಂದು ಹೇಳುತ್ತಿರುವವರ ಜೊತೆಯೂ ಚರ್ಚಿಸಬೇಕಿದೆ ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular