ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಒಂದು ಕಂದಕಕ್ಕೆ ಉರುಳಿದ ಪರಿಣಾಮ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.
ತಿರುವನಂತಪುರಂನಿಂದ ಮುನ್ನಾರ್ ಗೆ ತೆರಳುತ್ತಿದ್ದ ಈ ಬಸ್ಸು ಇಂದು ಬೆಳಗ್ಗೆ 8:00 ಗಂಟೆ ಸುಮಾರಿಗೆ ಇಡುಕ್ಕಿ ಜಿಲ್ಲೆಯ ನೆರಿಯಮಂಗಲಂ ಬಳಿ ಕಂದಕಕ್ಕೆ ಉರುಳಿದೆ.
ಇದರಿಂದ ಪ್ರಯಾಣಿಕರು ಗಾಯಗೊಂಡಿದ್ದು, ಈ ಪೈಕಿ ಐವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಅತಿ ವೇಗವಾಗಿ ಬರುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.