HomeKarnatakaBIG NEWS: ಮಾರ್ಚ್ 9 ರಂದು 'ಕರ್ನಾಟಕ ಬಂದ್' ಗೆ ಕಾಂಗ್ರೆಸ್ ಕರೆ

BIG NEWS: ಮಾರ್ಚ್ 9 ರಂದು ‘ಕರ್ನಾಟಕ ಬಂದ್’ ಗೆ ಕಾಂಗ್ರೆಸ್ ಕರೆ

ಭ್ರಷ್ಟಾಚಾರ ವಿರೋಧಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಮಾರ್ಚ್ 9ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಅಂದು ಬೆಳಗ್ಗೆ 9 ಗಂಟೆಯಿಂದ 11 ಗಂಟೆಯವರೆಗೆ ಬಂದ್ ನಡೆಸಲಾಗುತ್ತದೆ.

ಎರಡು ಗಂಟೆಗಳ ಕಾಲ ನಡೆಯಲಿರುವ ಈ ಬಂದ್ ವೇಳೆ ಶೈಕ್ಷಣಿಕ ಸಂಸ್ಥೆಗಳು, ಆಸ್ಪತ್ರೆ, ಸಾರಿಗೆ ಹಾಗೂ ಇತರೆ ಅಗತ್ಯ ಸೇವೆಗಳಿಗೆ ಯಾವುದೇ ತೊಂದರೆಯಾಗದಂತೆ ಎಚ್ಚರ ವಹಿಸಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಎಲ್ಲ ವರ್ಗದ ಜನರ ಬದುಕನ್ನು ನಾಶ ಮಾಡಿದ್ದು, ಭ್ರಷ್ಟಾಚಾರದಿಂದ, ಭ್ರಷ್ಟಾಚಾರಕ್ಕಾಗಿ ಹಾಗೂ ಭ್ರಷ್ಟಾಚಾರಕ್ಕೊಸ್ಕರ ಕಾರ್ಯ ನಿರ್ವಹಿಸುತ್ತಿದೆ ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಬೇಕು ಅಥವಾ ಅವರನ್ನು ವಜಾಗೊಳಿಸಬೇಕು ಎಂದು ಒತ್ತಾಯಿಸಿ ಈ ಬಂದ್ ನಡೆಸಲಾಗುತ್ತದೆ ಎಂದು ಅವರು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular