ಮೈತ್ರಿ ಸರ್ಕಾರ ಪತನವಾಗಲು ಕಾರಣರಾದ ಶಾಸಕರ ಕುರಿತು HDK ಹೊಸ ಬಾಂಬ್; 15 ದಿನ ಕಾಯಿರಿ ಏನಾಗಲಿದೆ ಎಂಬುದು ಗೊತ್ತಾಗುತ್ತೆ ಎಂದ ಜೆಡಿಎಸ್ ನಾಯಕ

ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಿದ್ದವರ ಕುರಿತು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಭಾನುವಾರದಂದು ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಸುರೇಶ್ ಗೌಡ ಪರವಾಗಿ ಪ್ರಚಾರ ನಡೆಸಿದ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ಯಾರೆಲ್ಲಾ ಟೋಪಿ ಹಾಕಿ ಹೋಗಿದ್ದರೋ ಅವರುಗಳ ಪೈಕಿ ಎಷ್ಟು ಜನ ಮತ್ತೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬುದನ್ನು ಕಾದು ನೋಡಿ ಎನ್ನುವ ಮೂಲಕ ಕುತೂಹಲ ಹೆಚ್ಚಿಸಿದ್ದಾರೆ.

ಇನ್ನು 15 ದಿನಗಳ ಕಾಲ ಕಾದರೆ ನನಗೆ ಟೋಪಿ ಹಾಕಿ ಹೋದ 17 ಮಂದಿಯ ಪೈಕಿ ಎಷ್ಟು ಜನ ಮತ್ತೆ ಕಾಂಗ್ರೆಸ್ ಗೆ ಹೋಗಲಿದ್ದಾರೆ ಎಂಬುದು ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿಯವರು ಹೇಳಿದ್ದು, ಹೀಗಾಗಿ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿರುವ ಕೆಲವರು ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಬಹುದು ಎಂಬುದನ್ನು ಸೂಚ್ಯವಾಗಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read