HomeEntertainmentರಶ್ಮಿಕಾ ಮಂದಣ್ಣ ಲುಕ್ ಗೆ ಟೀಮ್ ಇಂಡಿಯಾ ಯುವ ಆಟಗಾರ ಕ್ಲೀನ್ ಬೋಲ್ಡ್....!

ರಶ್ಮಿಕಾ ಮಂದಣ್ಣ ಲುಕ್ ಗೆ ಟೀಮ್ ಇಂಡಿಯಾ ಯುವ ಆಟಗಾರ ಕ್ಲೀನ್ ಬೋಲ್ಡ್….!

ಸ್ಯಾಂಡಲ್ ವುಡ್ ನ ‘ಕಿರಿಕ್ ಪಾರ್ಟಿ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ನಟಿ ರಶ್ಮಿಕಾ ಮಂದಣ್ಣ, ಈಗ ನ್ಯಾಷನಲ್ ಕ್ರಶ್ ಆಗಿ ಹೊರಹೊಮ್ಮಿದ್ದಾರೆ. ಪರಭಾಷಾ ಚಿತ್ರಗಳಲ್ಲಿಯೇ ಹೆಚ್ಚಾಗಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಬಾಲಿವುಡ್ ಚಿತ್ರರಂಗದಲ್ಲೂ ಅವಕಾಶ ಪಡೆದುಕೊಂಡಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಬೋಲ್ಡ್ ಅವತಾರದಲ್ಲಿಯೇ ಕಾಣಿಸಿಕೊಳ್ಳುತ್ತಿರುವ ರಶ್ಮಿಕಾ ಮಂದಣ್ಣ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅಲ್ಲದೆ ಪ್ಯಾರಿಸ್ ಫ್ಯಾಶನ್ ವೀಕ್ ಗೂ ತೆರಳಿದ್ದ ರಶ್ಮಿಕಾ ಮಂದಣ್ಣ ರ್ಯಾಂಪ್ ವಾಕ್ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ರಶ್ಮಿಕಾ ಮಂದಣ್ಣ ಅವರಿಗೆ ಸೆಲೆಬ್ರೆಟಿಯೊಬ್ಬರು ಅಭಿಮಾನಿಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೌದು, ಟೀಮ್ ಇಂಡಿಯಾ ಯುವ ಆಟಗಾರ ಶುಭಮನ್ ಗಿಲ್, ರಶ್ಮಿಕಾ ಮಂದಣ್ಣ ಅವರ ಸೌಂದರ್ಯಕ್ಕೆ ಮಾರು ಹೋಗಿದ್ದಾರೆ. ಹೀಗಾಗಿ ಇತ್ತೀಚೆಗೆ ನಡೆದ ಸಂದರ್ಶನ ಒಂದರಲ್ಲಿ ನಿಮ್ಮ ಕ್ರಶ್ ಯಾರು ಎಂದು ಕೇಳಿದ ಪ್ರಶ್ನೆಗೆ ರಶ್ಮಿಕಾ ಮಂದಣ್ಣ ಅವರ ಹೆಸರೇಳಿದ್ದಾರೆ. ಈ ವಿಚಾರ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ ವೈರಲ್ ಆಗಿದೆ.

For Latest News Updates, Join Our Whatsapp Community🚩
RELATED ARTICLES

Most Popular