ತಮ್ಮ ಪುತ್ರನ ಕಛೇರಿ ಹಾಗೂ ನಿವಾಸದ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ ಬಳಿಕ ಚನ್ನಗಿರಿ ಕ್ಷೇತ್ರದ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರಿಗೂ ಬಂಧನದ ಭೀತಿ ಎದುರಾಗಿದೆ.
ಲೋಕಾಯುಕ್ತ ದಾಳಿಯಲ್ಲಿ ಕೋಟ್ಯಾಂತರ ರೂಪಾಯಿ ಹಣ ಪತ್ತೆಯಾಗಿದ್ದು, ಟೆಂಡರ್ ಕೊಡಿಸುವ ಸಲುವಾಗಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಪ್ರಶಾಂತ್ ಅವರ ಕಚೇರಿ ಹಾಗೂ ನಿವಾಸದ ಮೇಲೆ ದಾಳಿ ನಡೆಸಲಾಗಿತ್ತು.
ಈ ದಾಳಿ ಬಳಿಕ ತಲೆಮರೆಸಿಕೊಂಡಿರುವ ಮಾಡಾಳ್ ವಿರೂಪಾಕ್ಷಪ್ಪ, ಇಂದು ತಮ್ಮ ವಕೀಲರ ಮೂಲಕ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದು, ತುರ್ತು ವಿಚಾರಣೆ ನಡೆಸುವಂತೆ ಅವರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.
ನ್ಯಾಯಮೂರ್ತಿ ನಟರಾಜನ್ ಅವರು ವಿಚಾರಣೆಯನ್ನು ನಾಳೆಗೆ ನಿಗದಿಪಡಿಸಿದ್ದು, ಮಾಡಾಳ್ ವಿರೂಪಾಕ್ಷಪ್ಪನವರಿಗೆ ನಿರೀಕ್ಷಣಾ ಜಾಮೀನು ಸಿಗಲಿದೆಯಾ ಎಂಬುದನ್ನು ಕಾದು ನೋಡಬೇಕಿದೆ.