HomeAutoBIG NEWS: ಠಾಣೆ ಆವರಣದಲ್ಲಿ ಬೆಂಕಿ ಅವಘಡ; 50 ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು...

BIG NEWS: ಠಾಣೆ ಆವರಣದಲ್ಲಿ ಬೆಂಕಿ ಅವಘಡ; 50 ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಕರಕಲು

ಭಾನುವಾರದಂದು ಸಂಭವಿಸಿದ ಅಗ್ನಿ ಅವಘಡದಲ್ಲಿ ಠಾಣೆ ಮುಂದೆ ನಿಲ್ಲಿಸಿದ್ದ 50 ಕ್ಕೂ ಅಧಿಕ ದ್ವಿಚಕ್ರ ವಾಹನಗಳು ಸುಟ್ಟು ಭಸ್ಮವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ವಿವಿಧ ಅಪರಾಧ ಪ್ರಕರಣಗಳಲ್ಲಿ ಜಪ್ತಿ ಮಾಡಿ ಕೊಡಿಗೆಹಳ್ಳಿ ಠಾಣೆ ಆವರಣದಲ್ಲಿ ನಿಲ್ಲಿಸಿದ್ದ ಒಟ್ಟು 58 ದ್ವಿಚಕ್ರ ವಾಹನಗಳು ಸುಟ್ಟು ಕರಕಲಾಗಿದ್ದು, ಚಾಸಿ ಸಂಖ್ಯೆ ಆಧರಿಸಿ ವಾಹನಗಳ ಮಾಹಿತಿಯನ್ನು ಪಡೆದುಕೊಳ್ಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾನುವಾರ ಮಧ್ಯಾಹ್ನದ ಸುಮಾರಿಗೆ ಇದ್ದಕ್ಕಿದ್ದಂತೆ ವಾಹನಗಳಿಗೆ ಬೆಂಕಿ ತಗುಲಿದೆ ಎನ್ನಲಾಗಿದ್ದು, ನಾಲ್ಕು ಗಂಟೆಗಳ ಕಾಲ ಶ್ರಮಿಸಿ ಅಗ್ನಿಶಾಮಕ ದಳ ಬೆಂಕಿಯನ್ನು ನಂದಿಸಿದೆ. ಅಷ್ಟರೊಳಗಾಗಿ 58 ವಾಹನಗಳು ಬೆಂಕಿಗೆ ಆಹುತಿಯಾಗಿವೆ.

For Latest News Updates, Join Our Whatsapp Community🚩
RELATED ARTICLES

Most Popular