ವುಮೆನ್ಸ್ ಪ್ರೀಮಿಯರ್ ಲೀಗ್ ನ ನಾಲ್ಕನೇ ಪಂದ್ಯ ಇಂದು ಮುಂಬೈನಲ್ಲಿ ನಡೆಯಲಿದ್ದು ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಅರ್ಮನ್ ಪ್ರೀತ್ ಕೌರ್ ನಾಯಕತ್ವದ ಮುಂಬೈ ಇಂಡಿಯನ್ಸ್ ಸೆಣಸಾಡಲಿವೆ.
ಮುಂಬೈ ಇಂಡಿಯನ್ಸ್ ಮೊದಲ ಪಂದ್ಯದಲ್ಲಿ ಈಗಾಗಲೇ ಭರ್ಜರಿ ಜಯ ಸಾಧಿಸಿದ್ದು ಬಲಿಷ್ಠ ತಂಡವಾಗಿ ಹೊರ ಹೊಮ್ಮಿದೆ. ಇನ್ನು ಆರ್‌ಸಿಬಿ ತಂಡ ನಿನ್ನೆಯಷ್ಟೇ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 60 ರನ್‌ಗಳಿಂದ ಸೋಲನುಭವಿಸಿದ್ದು ಇಂದಿನ ಪದ್ಯದಲ್ಲಿ ಗೆಲ್ಲುವ ಹುಮ್ಮಸ್ಸಿನಲ್ಲಿದ್ದಾರೆ.
ನಿನ್ನೆ ನಡೆದ ಗುಜರಾತ್ ಟೈಟನ್ಸ್ ಹಾಗೂ ಯುಪಿ ವಾರಿಯರ್ಸ್ ನಡುವಣ ರೋಚಕ ಪಂದ್ಯದಲ್ಲಿ ಯುಪಿ ವಾರಿಯರ್ಸ್ ಜಯಭೇರಿಯಾಗಿದ್ದು ಪ್ರೇಕ್ಷಕರಿಗೆ ಸಾಕಷ್ಟು ಮನರಂಜನೆ ನೀಡಿದೆ.
ಯುಪಿ ವಾರಿಯರ್ಸ್ ನ ಗ್ರೇಸ್ ಹ್ಯಾರೀಸ್ ಕೇವಲ 26 ಎಸೆತಗಳಲ್ಲಿ 59ರನ್ ಸಿಡಿಸುವ ಮೂಲಕ ಪಂದ್ಯದ ದಿಕ್ಕನ್ನೇ ಬದಲಾಯಿಸಿದರು. ಹ್ಯಾರಿಸ್ ಅವರ ಸ್ಪೋಟಕ ಬ್ಯಾಟಿಂಗ್ ಗೆ ಯುವ ಕ್ರಿಕೆಟಿಗರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.