HomeKarnatakaBIG NEWS: ಮಾಜಿ ಶಾಸಕರಿಬ್ಬರು ಇಂದು ಕಾಂಗ್ರೆಸ್ ಗೆ ಸೇರ್ಪಡೆ

BIG NEWS: ಮಾಜಿ ಶಾಸಕರಿಬ್ಬರು ಇಂದು ಕಾಂಗ್ರೆಸ್ ಗೆ ಸೇರ್ಪಡೆ

ಚುನಾವಣೆ ಸಮೀಪಿಸುತಿದ್ದಂತೆಯೇ ಪಕ್ಷಾಂತರ ಪರ್ವ ಬಲು ಜೋರಾಗಿ ನಡೆದಿದ್ದು, ಇಬ್ಬರು ಮಾಜಿ ಶಾಸಕರು ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಹಾಗೂ ಬಿಜೆಪಿ ಎಸ್ಸಿ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಜಿ.ಎಸ್. ನಂಜುಂಡಸ್ವಾಮಿ ಹಾಗೂ ದೊಡ್ಡಬಳ್ಳಾಪುರ ಕ್ಷೇತ್ರದ ಮಾಜಿ ಶಾಸಕ ಜೆ. ನರಸಿಂಹಸ್ವಾಮಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಕೊಳ್ಳೇಗಾಲ ಮೀಸಲು ಕ್ಷೇತ್ರದಿಂದ ಹಾಲಿ ಶಾಸಕ ಮಹೇಶ್ ಅವರಿಗೆ ಬಿಜೆಪಿ ಟಿಕೆಟ್ ದೊರೆಯುವುದು ಖಚಿತವಾಗಿರುವುದರಿಂದ ನಂಜುಂಡಸ್ವಾಮಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಇನ್ನು ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪುತ್ರ ಜೆ. ನರಸಿಂಹ ಸ್ವಾಮಿ ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಗೆ ಬರುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular